Gruha Lakshmi Yojana: ಗೃಹಲಕ್ಷ್ಮಿ 11ನೇ ಕಂತಿನ ಹಣ ಯಾವಾಗ ಬರುತ್ತೆ! ಸಿಎಂ ಸಿದ್ದರಾಮಯ್ಯ.
ರಾಜ್ಯ ಸರ್ಕಾರದ ಪ್ರಮುಖ ಯೋಜನೆಗಳಲ್ಲಿ ಒಂದಾಗಿರುವ ಗೃಹ ಲಕ್ಷ್ಮಿ ಯೋಜನೆ ಚುನಾವಣೆಯ ನಂತರ ಕಣ್ಮರೆಯಾಗಲಿದೆ ಎಂದು ಇತ್ತೀಚೆಗೆ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಸುದ್ದಿಯಾಗಿತ್ತು. ಆದರೆ ಇದೀಗ ರಾಜ್ಯ ಸರ್ಕಾರವೇ ಈ ಬಗ್ಗೆ ಭರವಸೆ ನೀಡಿದ್ದು, ಯಾವುದೇ ಕಾರಣಕ್ಕೂ ಯಾವುದೇ ಖಾತರಿ ಯೋಜನೆಗಳು ನಿಲ್ಲುವ ಪ್ರಮೇಯವೇ ಇಲ್ಲ ಎಂದು ಸ್ಪಷ್ಟ ಭರವಸೆ ನೀಡಿದೆ.
ಅದರಲ್ಲೂ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆಯಾಗಿರುವ ಲಕ್ಷ್ಮೀ ಹೆಬ್ಬಾಳ್ಕರ್ ಅವರು ಈ ವಿಚಾರದ ಬಗ್ಗೆ ಸ್ಪಷ್ಟ ಭರವಸೆ ನೀಡಿರುವುದು ಎಲ್ಲರೂ ನಿಟ್ಟುಸಿರು ಬಿಡುವಂತೆ ಮಾಡಿದೆ. ಗೃಹ ಲಕ್ಷ್ಮೀ ಯೋಜನೆಯಡಿ ಈಗಾಗಲೇ 10ನೇ ಕಂತಿನ ಹಣ ಬಿಡುಗಡೆಯಾಗಿದ್ದು, ನೇರವಾಗಿ ಮಹಿಳೆಯರ ಖಾತೆಗೆ ಹಣ ಜಮಾ ಆಗಿದ್ದು, 11ನೇ ಕಂತು ಯಾವಾಗ ಸಿಗುತ್ತದೆ ಎಂದು ರಾಜ್ಯದ ಪ್ರತಿಯೊಬ್ಬ ಮಹಿಳೆಯೂ ಕಾಯುತ್ತಿದ್ದಾರೆ.
ಏತನ್ಮಧ್ಯೆ ತಿಳಿದು ಬಂದಿರುವ ಮಾಹಿತಿಯ ಪ್ರಕಾರ, ಪಡಿತರ ಚೀಟಿಗೆ ಆಧಾರ್ ಕಾರ್ಡ್ ಲಿಂಕ್ ಮಾಡದ ಕಾರಣ ಅಥವಾ ಬ್ಯಾಂಕ್ ಖಾತೆಗೆ ಆಧಾರ್ ಕಾರ್ಡ್ ಲಿಂಕ್ ಮಾಡದ ಕಾರಣ ಕೆಲವು ಮಹಿಳೆಯರು ತಮ್ಮ ಖಾತೆಗಳಿಗೆ ಹಣ ವರ್ಗಾವಣೆಯಾಗುತ್ತಿಲ್ಲ. . ಈ ನಿಟ್ಟಿನಲ್ಲಿ ಇಲಾಖೆ ಈ ಹಿಂದೆ ಮಹಿಳೆಯರಿಗೆ ಲಿಂಕ್ ಮಾಡುವಂತೆ ಸೂಚನೆ ನೀಡಿತ್ತು. ಇದಾದ ನಂತರವೂ ಲಿಂಕ್ ಆಗದ ಮಹಿಳೆಯರ ಖಾತೆಗಳಿಗೆ ಹಣ ವರ್ಗಾವಣೆಯಾಗದ ಸನ್ನಿವೇಶಗಳಿವೆ ಎನ್ನಬಹುದು.
ನಿಮಗೆಲ್ಲ ಗೊತ್ತಿರುವ ಹಾಗೆ ಜೂನ್ ತಿಂಗಳು ಮುಗಿಯುತ್ತಾ ಬಂತು. ಕರ್ನಾಟಕದ ಪ್ರತಿಯೊಬ್ಬ ಮಹಿಳೆಯೂ ಗೃಹ ಲಕ್ಷ್ಮಿ ಯೋಜನೆಯ 11ನೇ ಕಂತಿಗಾಗಿ ಕಾಯುತ್ತಿದ್ದಾರೆ. ಇದರ ಬೆನ್ನಲ್ಲೇ ಇದೀಗ ಮಕ್ಕಳ ಮತ್ತು ಮಹಿಳಾ ಕಲ್ಯಾಣ ಇಲಾಖೆ ಸಚಿವೆಯಾಗಿರುವ ಲಕ್ಷ್ಮೀ ಹೆಬ್ಬಾಳ್ಕರ್ ಅವರು ಜೂ.20ರಂದು ಎಲ್ಲರ ಖಾತೆಗೆ ಹಣ ವರ್ಗಾವಣೆಯಾಗುವ ಸಾಧ್ಯತೆ ಹೆಚ್ಚಿದೆ ಎಂಬ ಮಾಹಿತಿ ನೀಡಿದ್ದಾರೆ.
ಕೆಲವೆಡೆ ಸರ್ವರ್ ಸಮಸ್ಯೆ ಇರುವ ಕಾರಣ ಒಂದೆರಡು ದಿನ ತಡವಾದರೆ ಅಚ್ಚರಿ ಪಡಬೇಕಿಲ್ಲ ಆದರೆ ನಿಗದಿತ ಸಮಯದಲ್ಲಿ ಮಹಿಳೆಯರ ಖಾತೆಗೆ ಹಣ ವರ್ಗಾವಣೆಯಾಗುವುದರಲ್ಲಿ ಸಂಶಯವಿಲ್ಲ ಎಂದು ಇಲಾಖೆ ತಿಳಿಸಿದೆ. ಎಂದರು.