Senior Citizens: ಹಿರಿಯ ನಾಗರಿಕರಿಗೆ ಗುಡ್ ನ್ಯೂಸ್ ಕೊಟ್ಟ ರಾಜ್ಯ ಸರ್ಕಾರ! ಏನದು ತಿಳಿಯಿರಿ.

ಹಿರಿಯ ನಾಗರಿಕರ (Senior Citizens) ಆರ್ಥಿಕ ಜೀವನ ಮತ್ತು ಆರೋಗ್ಯ ಜೀವನವನ್ನು ಸುಧಾರಿಸುವ ಸಲುವಾಗಿ ರಾಜ್ಯ ಸರ್ಕಾರ ಒಂದಲ್ಲಾ ಒಂದು ರೀತಿಯ ನಾವಿನ್ಯ ಯೋಜನೆಗಳನ್ನು ಪರಿಚಯಿಸುತ್ತಿದೆ. ಅದರಲ್ಲಿ ಇತ್ತೀಚಿಗೆ ಆರೋಗ್ಯ ವಿಮೆ ಯೋಜನೆ ಸದ್ಯದಲ್ಲಿಯೇ ಜಾರಿಗೆ ತರಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ (Lakshmi Hebbalkar) ಮಾಹಿತಿ ನೀಡಿದ್ದಾರೆ.

ರಾಜ್ಯ ಸರ್ಕಾರದಿಂದ ಹಿರಿಯ ನಾಗರಿಕರಿಗೆ ಮಾಸಾಶನ ಹೆಚ್ಚಳ:

ರಾಜ್ಯದಲ್ಲಿ ಸುಮಾರು 50.69 ಲಕ್ಷ ಜನರಿಗೆ ಮಾಸಾಶನ ಕೊಡಲಾಗುತ್ತಿದೆ. ರಾಜ್ಯದಲ್ಲಿ 63 ವೃದ್ಧಾಶ್ರಮಗಳನ್ನು ಆರಂಭಿಸಲಾಗಿದ್ದು ಅವುಗಳಲ್ಲಿ ಸುಮಾರು 1,575 ಹಿರಿಯ ನಾಗರಿಕರು (Senior Citizens) ವಾಸಿಸುತ್ತಿದ್ದಾರೆ. ಮುಂದಿನ ದಿನಗಳಲ್ಲಿ ಇನ್ನೂ 19 ವೃದ್ಧಾ ಶ್ರಮಗಳನ್ನು ಆರಂಭಿಸುವ ಬಗ್ಗೆ ಚಿಂತನೆ ನಡೆಸಲಾಗಿದೆ.

ಹಿರಿಯ ನಾಗರಿಕರಿಗೆ ಆರೋಗ್ಯ ವಿಮೆ ಯೋಜನೆ ಜಾರಿ:

ಲಕ್ಷ್ಮಿ ಹೆಬ್ಬಾಳ್ಕರ್ (Lakshmi Hebbalkar) ಅವರು ತಿಳಿಸಿರುವ ಪ್ರಕಾರ, “ಹಿರಿಯರು ಸಮಾಜಕ್ಕೆ ಮಾರ್ಗದರ್ಶಕರು. ಅವರಿಗೆ ಗೌರವ ಕೊಡುವ ಉದ್ದೇಶದಿಂದ ರಾಜ್ಯದಲ್ಲಿ 50.69 ಲಕ್ಷ ಜನರಿಗೆ ಮಾಸಾಶನ ಕೊಡಲಾಗುತ್ತಿದೆ. ರಾಜ್ಯದಲ್ಲಿ ಈಗ 63 ವೃದ್ಧಾಶ್ರಮಗಳನ್ನು ತೆರೆಯಲಾಗಿದ್ದು 1,575 ಹಿರಿಯ ನಾಗರಿಕರು ವೃದ್ಧಾಶ್ರಮದಲ್ಲಿ ವಾಸಿಸುತ್ತಿದ್ದಾರೆ. ಹಿರಿಯರಿಗಾಗಿ ಆರೋಗ್ಯ ವಿಮೆ ಯೋಜನೆ ಜಾರಿಗೆ ತರಲು ಕ್ರಮ ಕೈಗೊಳ್ಳಲಾಗುವುದು” ಎಂಬುದಾಗಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಸಚಿವರಾದ ಲಕ್ಷ್ಮಿ ಹೆಬ್ಬಾಳ್ಕರ್ ತಿಳಿಸಿದ್ದಾರೆ.